February 1, 2026

ಸಮನ್ವಯ ಆರ್ಟ್ಸ್ & ಸ್ಪೋರ್ಟ್ ಕ್ಲಬ್ ಕೊಳ್ನಾಡು ಸಾಲೆತ್ತೂರು: ಇದರ ವತಿಯಿಂದ ವಾಲಿಬಾಲ್ ಪಂದ್ಯಾವಳಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

0
image_editor_output_image964569787-1761554831918

ವಿಟ್ಲ: ಸಮನ್ವಯ ಆರ್ಟ್ಸ್ & ಸ್ಪೋರ್ಟ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ವತಿಯಿಂದ ಸಾಲೆತ್ತೂರು ಮೈದಾನ್ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು AK ಅನ್ಸಾಫ್ ಅವರು ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಉದ್ಘಾಟನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾದ ಅಬ್ಬಾಸ್ ಅಲಿ, ಕೆಡಿಪಿ ಸದಸ್ಯರಾದ ಎಬಿ ಅಬ್ದುಲ್ಲಾ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಬೋಳಂತೂರು, ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇಂತಿಯಾಜ್ ಕಲ್ಲಡ್ಕ ಉಪಸ್ಥಿತರಿದ್ದರು.

ರಾತ್ರಿ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ ಕುಲಾಲು, ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಲತೀಫ್ ಪರ್ತಿಪ್ಪಾಡಿ, ಹಸೈನಾರ್ ತಾಳಿತ್ತನೂಜಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಖಾದರ್ ಮೂಸಾ, ಎಸ್ ಡಿಪಿಐ ವಲಯ ಅಧ್ಯಕ್ಷರಾದ ಬಶೀರ್ ಕೊಳ್ನಾಡು ಉಪಸ್ಥಿತರಿದ್ದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮಹಮ್ಮದ್, ವೈದ್ಯರಾದ Dr ರವಿರಾಜ್ ರೈ ಕುಲಾಲು, ಶಿಕ್ಷಕಿ ಶ್ರೀಮತಿ ಲತಾ ರೈ ಅವರನ್ನು ವಿವಿಧ ಕ್ಷೇತ್ರಗಳಲ್ಲಿ  ಮಾಡಿದ ಸಾಧನೆಯನ್ನು ಗೌರವಿಸಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಉದ್ಯಮಿ ಮಾಧವ ಮಾವೆ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಇಬ್ರಾಹಿಂ ನವಾಜ್, ಹಳೆ ವಿದ್ಯಾರ್ಥಿ ಸಂಘ ಸರ್ಕಾರಿ ಪ್ರೌಢಶಾಲೆ ಮಂಚಿ ಇದರ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ, ಉದ್ಯಮಿ ಜಯಂತ್ ಮಂಚಿ, ಸಂಘಟಕರಾದ ಉಮ್ಮರ್ ಸಾಲೆತ್ತೂರು, ಹಫೀಜ್ ಕಟ್ಟೆ, ಶಫೀಕ್ ಕಟ್ಟೆ ಉಪಸ್ಥಿತರಿದ್ದರು. ವಾಲಿಬಾಲ್ ಪಂದ್ಯಾವಳಿಯಲ್ಲಿ ಅಪ್ಪಿ ಗೈಸ್ ಪ್ರಥಮ, ತಾಜ್ ಕಟ್ಟೆ ದ್ವೀತಿಯ ಸ್ಥಾನ ಪಡೆಯಿತು.

Leave a Reply

Your email address will not be published. Required fields are marked *

error: Content is protected !!