February 1, 2026

ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪ: ಕಟ್ಟಿಹಾಕಿ ಯುವಕನ ಹತ್ಯೆ

0
image_editor_output_image832724731-1761557401721.jpg

ಬೀದ‌ರ್: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಾರಾಷ್ಟ್ರ ಮೂಲದ ಯುವಕನನ್ನು ಕಟ್ಟಿಹಾಕಿ ಹೊಡೆದು ಹತ್ಯೆ ಮಾಡಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.

ವಿಷ್ಣು (27) ಮೃತ ಯುವಕ. ವಿಷ್ಣು ಬೀದರ್‌ನ ಚಿಂತಾಕಿ ಗ್ರಾಮದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇನ್ನು ಯುವತಿಗೆ ಈಗಾಗಲೇ ಮದುವೆಯಾಗಿದ್ದರೂ, ಆಕೆ ವಿಷ್ಣುವಿನೊಟ್ಟಿಗೆ ಪ್ರೀತಿಯಲ್ಲಿ ಬಿದ್ದಿದ್ದಳು.

ಇವರಿಬ್ಬರ ವಿಷಯ ತಿಳಿಯುತ್ತಲೇ ಯುವತಿ ಕುಟುಂಬಸ್ಥರು ವಿಷ್ಣುವನ್ನು ಕರೆಸಿ ಕಂಬಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ. ಸದ್ಯ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದೆ.

Leave a Reply

Your email address will not be published. Required fields are marked *

error: Content is protected !!