February 1, 2026

ಕಾಸರಗೋಡು: ಪ್ಲೈವುಡ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ: ಓರ್ವ ಮೃತ್ಯು, 25ಕ್ಕೂ ಅಧಿಕ ಮಂದಿಗೆ ಗಾಯ

0
n68668338917615850267781b43a69bad250d9b50115b9b2cfab91eaa381f8656548aba3c5d3c889057a02d.jpg

ಕಾಸರಗೋಡು: ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ಕೈಗಾರಿಕಾ ಎಸ್ಟೇಟ್ ಪ್ರದೇಶದಲ್ಲಿನ ಡೆಕೊರ್ ಪ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಮೃತಪಟ್ಟು 25ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿಯನ್ನು ಅಸ್ಸಾಂ ನಿವಾಸಿ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಫ್ಯಾಕ್ಟರಿಯ ಬಾಯ್ಲರ್ ಸ್ಫೋಟಗೊಂಡು ಈ ದುರಂತ ನಡೆದಿದೆ. ಸ್ಫೋಟದ ತೀವ್ರತೆಗೆ ಪರಿಸರವಾಸಿಗಳು ಬೆಚ್ಚಿ ಬೀಳುವಂತೆ ಮಾಡಿತ್ತು. ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ದುರಂತದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಪೇರಾಲು, ಕಣ್ಣೂರು, ಸಿದ್ಧಿಬಯಲು, ಅನಂತಪುರ ಆಸುಪಾಸಿನ ಪ್ರದೇಶಗಳಲ್ಲಿ ವ್ಯಾಪಕ ಕಂಪನ ಉಂಟಾಗಿದ್ದು, ಕೆಲವು ಮನೆಗಳ ಕಿಟಿಕಿ ಗಾಜುಗಳು ಪುಡಿ ಪುಡಿಯಾಗಿ ಬಿದ್ದಿವೆ. ಈ ಭಾಗಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!