March 19, 2026

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವದಾಗಿ ಕೋಟ್ಯಾಂತರ ರೂಪಾಯಿ ವಂಚನೆ: ದಂಪತಿಯ ಬಂಧನ

0
image_editor_output_image-1068568028-1761800989550.jpg

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರುೂ ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು.

ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.

ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ.

ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.

ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!