March 19, 2026

ಸುಬ್ರಹ್ಮಣ್ಯ: ಮದುವೆಯ ವಾಹನ ಪಲ್ಟಿ: ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ

0
image_editor_output_image-1004475809-1761804002704.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಲ್ಲೆ ತಿರುವಿನಲ್ಲಿ ವಾಹನ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ.

ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆರು ಅಂಬ್ಯೂಲೆನ್ಸ್‌ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!