March 18, 2026

ಸಕಲೇಶಪುರ: ಮಗುಚಿ ಬಿದ್ದ ವ್ಯಾನ್: ಓರ್ವ ಸ್ಥಳದಲ್ಲೇ ಸಾವು, 6 ಮಂದಿಯ ಸ್ಥಿತಿ ಗಂಭೀರ

0
image_editor_output_image727667523-1761891729377.jpg

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮೃತರನ್ನು ಶಿವರಾಜ್ (50) ಎಂದು ಗುರುತಿಸಲಾಗಿದೆ.

ವಾಹನದಲ್ಲಿ ಸುಮಾರು 30 ಪ್ರಯಾಣಿಕರಿದ್ದರು, ಅವರಲ್ಲಿ 20 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಶಿವರಾಜ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!