ಬೆಳ್ತಂಗಡಿ: ತಲೆ ಮೆರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2014 ರಲ್ಲಿ ಐಪಿಸಿ ಕಲಂ 406,420, 468, 478, 201 ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಹಾಗೂ ಬೆಳ್ತಂಗಡಿ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದ ಆರೋಪಿ ಕಮಲಾಕ್ಷ ಮಂಜೇಶ್ವರ ಎಂಬಾತ ಇದೀಗ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ.
ಪೊಲೀಸರು ಆತನನ್ನು ಅಕ್ಟೋಬರ್ 30 ರಂದು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.




