ತೆಕ್ಕಟ್ಟೆ: ಸ್ಕೂಟರ್ ಢಿಕ್ಕಿ ಹೊಡೆದು ಅಯ್ಯಪ್ಪ ಮಾಲಾಧಾರಿ ಸಾವು
ತೆಕ್ಕಟ್ಟೆ: ಸ್ಕೂಟರ್ ಒಂದು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಸಾವನಪ್ಪಿದ ಘಟನೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವೆಂಬರ್ 3 ರಂದು ಸಂಭವಿಸಿದೆ.
ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ.
ರವಿವಾರ ಮುಂಜಾನೆ ಸುಮಾರು 15 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರದಿಂದ ಹೆದ್ದಾರಿ ಮೂಲಕ ಮಂದಾರ್ತಿ ಶ್ರೀ ದುಗಾ೯ಪರಮೇಶ್ವರೀ ದೇಗುಲದೆಡೆಗೆ ಕಾಲ್ನಡಿಗೆ ಮೂಲಕ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯರು ತತ್ ಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನ. ೩ರಂದು ಬೆಳಗ್ಗೆ ಅಸುನೀಗಿದ್ದಾರೆ. ಮತ್ತೋವ೯ ಅಯ್ಯಪ್ಪ ವ್ರತಧಾರಿಗೂ ತೀವ್ರ ಸ್ವರೂಪದ ಗಾಯಗಳಾಗಿವೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




