ಕೊಲ್ಲೂರು ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್: ಪೊಲೀಸರಿಗೆ ದೂರು
ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ಒಂದನ್ನು ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ http://karnatakatemplesaccommodation.com ಬದಲಿಗೆ ಅಪರಿಚಿತರು ಅಕ್ರಮ ಲಾಭದ ಉದ್ದೇಶದಿಂದ karnatakatempleaccommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು ರಚಿಸಿದ್ದು, ಈ ನಕಲಿ ವೆಬ್‌ಸೈಟ್ ಮೂಲಕ ಹಲವಾರು ಜನರಿಗೆ ಲಲಿತಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿದ್ದಾರೆ. ಅವರಿಂದ ವಾಟ್ಸಾಪ್ ತಂತ್ರಾಂಶದಲ್ಲಿ ಪೋನ್ ಪೇಯ ಕ್ಯೂಆರ್ ಕೋಡ್‌ನ್ನು ನೀಡಿ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚಿಸಿ ಹಣ ದೋಚುತ್ತಿರುವುದು ಕಂಡುಬಂದಿದೆ.
ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ಲಲಿತಾಂಬಿಕಾ ಅತಿಥಿಗೃಹದ ಕೊಠಡಿಯನ್ನು ಕಾಯ್ದಿರಿಸಿ, ವಾಟ್ಸ್ಆ್ಯಪ್, ಪೋನ್ ಪೇ ಕ್ಯೂ ಆರ್ ಕೋಡ್ ಅನ್ನು ನೀಡಿ ಹಣ ಪಡೆದು, ನಕಲಿ ರಶೀದಿ ನೀಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.




