February 1, 2026

ದೆಹಲಿ: ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ: ಕನಿಷ್ಠ ಎಂಟು ಮಂದಿ ಮೃತ್ಯು

0
j76prlks_delhi-blast_160x120_10_November_25.jpg

ದೆಹಲಿ: ರಾಜಧಾನಿ ದಿಲ್ಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಾರೀ ಕಾರು ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಯಿಂದಾಗಿ ಸುತ್ತಮುತ್ತಲಿನ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರದೇಶದಲ್ಲಿ ಭೀತಿಯ ವಾತಾವರಣ ಆವರಿಸಿದೆ.

ಸೋಮವಾರ ಸಂಜೆ 6.30ರ ಸುಮಾರಿಗೆ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಅಚಾನಕ್ ಸ್ಫೋಟ ಸಂಭವಿಸಿದೆ. ಜೋರಾದ ಸ್ಫೋಟದ ಶಬ್ದದ ಬಳಿಕ ಬೆಂಕಿಯ ಜ್ವಾಲೆಗಳು ಕಂಡು ಬಂದಿದ್ದು, ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳದಲ್ಲಿದ್ದ ಅನೇಕರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ನಂತರ ದಿಲ್ಲಿ ಪೊಲೀಸರು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಪ್ರದೇಶವನ್ನು ಸಂಪೂರ್ಣ ಸುತ್ತುವರೆದು ಭದ್ರತೆ ಹೆಚ್ಚಿಸಲಾಗಿದೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳು ತಿಳಿಸಿವೆ.

“ರೆಡ್ ಫೋರ್ಟ್ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ತೀವ್ರತೆ ಬಹಳ ಹೆಚ್ಚಿದ್ದರಿಂದ, ಗಾಯಗಳಾಗುವ ಸಾಧ್ಯತೆ ಇದೆ,” ಎಂದು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!