ಪುತ್ತೂರು: ಕೋಮುಪ್ರಚೋದಕ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿಕೆ
ಪುತ್ತೂರು : ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಹಾಗೂ ವಾದ ಮಂಡಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನ.15ಕ್ಕೆ ಮುಂದೂಡಿದೆ.
ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಶಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ಮಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.




