February 1, 2026

ತಲೆಯನ್ನು ಕಲ್ಲಿನಿಂದ ಜಜ್ಜಿ ದೇವಸ್ಥಾನದ ಅರ್ಚಕನ ಹತ್ಯೆ

0
image_editor_output_image1351301584-1762809246609.jpg

ವಿಜಯಪುರ: ಜಿಲ್ಲೆಯ ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹತ್ಯೆಯಾದ ಯುವಕನನ್ನು ಅಮಸಿದ್ಧ ಬಿರಾದಾರ (35) ಎಂದು ಗುರುತಿಸಲಾಗಿದೆ.

ಮೃತ ಯುವಕನನ್ನು ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಅಮೋಘಸಿದ್ಧ ದೇವಸ್ಥಾನದ ಬಳಿಯೇ ಹತ್ಯೆ ಮಾಡಲಾಗಿದೆ. ಭಾನುವಾರ (ನ.9) ತಡರಾತ್ರಿ ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ತಲೆಯನ್ನು ಜಜ್ಜಿ ಬರ್ಬರವಾಗಿ ಕೊಲೆಗೈದು, ಪರಾರಿಯಾಗಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Leave a Reply

Your email address will not be published. Required fields are marked *

error: Content is protected !!