ನೂಜಿಬಾಳ್ತಿಲ ಗ್ರಾಮದ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ
ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಯುವಕನೊಬ್ಬ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬದಿಬಾಗಿಲು ಸಮೀಪದ ನಿವಾಸಿ ಜುಬಿನ್ ತೋಮಸ್ (24) ಎಂದು ಗುರುತಿಸಲಾಗಿದೆ. ಜುಬಿನ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ನವೆಂಬರ್ 11ರಂದು ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೊಟೇಲ್ ಮ್ಯಾನೇಜ್ಮೆಂಟ್ ಶಿಕ್ಷಣ ಪಡೆದು ಉದ್ಯೋಗದಲ್ಲಿದ್ದ ಜುಬಿನ್ ಕೆಲ ದಿನಗಳಲ್ಲೇ ವಿದೇಶದಲ್ಲಿ ಉದ್ಯೋಗಕ್ಕೆ ತೆರಳುವವರಿದ್ದರು. ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ಉದ್ಯೋಗಕ್ಕೂ ರಾಜೀನಾಮೆ ನೀಡಿದ್ದು, ವಿದೇಶದ ಉದ್ಯೋಗಕ್ಕೆ ತೆರಳಲು ಸಿದ್ಧತೆಯಲ್ಲಿದ್ದರು ಎಂದು ತಿಳಿದುಬಂದಿದೆ




