ಧರ್ಮಸ್ಥಳ ಪ್ರಕರಣ: ಮಟ್ಟಣ್ಣವರ್, ತಿಮರೋಡಿ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು: SIT ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ 39/2025 ತನಿಖೆಗೆ ಅಕ್ಟೋಬರ್ 30ರಂದು ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದ್ದು SIT ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಇವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ತಡೆಯಾಜ್ಞೆ ತೆರವುಗೊಳಿಸಿದ್ದು ಕಾರ್ಯಕರ್ತರಿಗೆ ಯಾವುದೇ ಕಿರುಕುಳವಾಗದಂತೆ ನೋಡಿಕೊಳ್ಳುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಿದರು. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNNS) ಸೆಕ್ಷನ್ 35(3)ರ ಅಡಿಯಲ್ಲಿ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣವರ್, ವಿಠಲ ಗೌಡ ಮತ್ತು ಜಯಂತ್ ಟಿ ಅವರಿಗೆ SIT ಈ ಹಿಂದೆ ನೋಟಿಸ್ ಜಾರಿ ಮಾಡಿತ್ತು.




