December 17, 2025

ಬೆಳ್ತಂಗಡಿ: ಜೈಲಿಂದ ಹೊರ ಬಂದ ಬೆನ್ನಲ್ಲೇ ಮತ್ತೆ ಕಳ್ಳತನಕ್ಕಿಳಿದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

0
image_editor_output_image602960227-1763016081189.jpg

ಬೆಳ್ತಂಗಡಿ: ಉಡುಪಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿ, ಇತ್ತೀಚೆಗಷ್ಟೇ ಜೈಲಿಂದ ಹೊರಬಂದಿದ್ದ ಇತ್ತ ಬರ್ಪೆ ಅಬೂಬಕರ್ ಮತ್ತೆ ಕಳ್ಳತನ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ವೇಣೂರು ಪೊಲೀಸರು ಇತ್ತೆ ಬರ್ಪೆ ಅಬೂಬಕರ್(71) ನನ್ನು ಅರೆಸ್ಟ್ ಮಾಡಿದ್ದಾರೆ.

ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಸಬ್ ಇನ್ಸ್ಪೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಾಸ್ಪದವಾಗಿ ಸ್ಕೂಟರ್ ವಾಹನದಲ್ಲಿ ಬರುತ್ತಿದ್ದ ಇತ್ತೆ ಬರ್ಪೆ ಅಬೂಬಕರ್ ನನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಮತ್ತು ವ್ಯಕ್ತಿಯನ್ನು ಪರಿಶೀಲನೆ ವೇಳೆ ಮಂಗಳೂರಿನಲ್ಲಿ ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ. ವೇಣೂರು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ಮಾಡಿದಾಗ ನಾರವಿಯ ಕುತ್ಲೂರಿನ ಅವಿನಾಶ್ ಮನೆಯಲ್ಲಿ ಕಳ್ಳತನ ಮಾಡಿರುವುದನ್ನು ಬಾಯಿಬಿಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!