March 21, 2026

ನ.16ರಂದು ವಿಟ್ಲ ಪಡ್ನೂರು ಗ್ರಾಮದ ಕಡಂಬುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
image_editor_output_image-497482784-1763049009489

ವಿಟ್ಲ: ಸ್ವೀಡಿ ಮಲ್ಟಿ ಮೋಡ್ಸ್ ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಸ್ಥಾಪಕಾಧ್ಯಕ್ಷ ಬಿ ಸಂದೇಶ್ ಶೆಟ್ಟಿ ನೇತೃತ್ವದಲ್ಲಿ ವಿಟ್ಲ ಸಮುದಾಯ ಆರೋಗ್ಯ, ಎ.ಜೆ ವೈದ್ಯಕೀಯ ಆಸ್ಪತ್ರೆ ಕುಂಟಿಕಾನ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನ.16ರ ಭಾನುವಾರ ಕಡಂಬು ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.

ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ(ಮೂಗು, ಗಂಟಲು, ತಜ್ಞರು) ತಪಾಸಣಾ, ಕಣ್ಣಿನ ತಜ್ಞರು, ಬಿಪಿ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ. ಲಭ್ಯ ಇರುವ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಸಂದೇಶ್ ಶೆಟ್ಟಿ ಬಿಕ್ನಾಜೆ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!