ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ: ಎನ್‌ಡಿಎಗೆ ಮುನ್ನಡೆ, ಮಹಾಘಟಬಂಧನಗೆ ಹಿನ್ನಡೆ
ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು (ಶುಕ್ರವಾರ) ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ನಡೆದ ಬಿಹಾರ ವಿಧಾನಸಭೆ ಚುನಾವಣೆಯು ದಾಖಲೆಯ ಮತದಾನಕ್ಕೆ ಸಾಕ್ಷಿಯಾಗಿತ್ತು. ಸರಳ ಬಹುಮತ ಪಡೆಯುವ ಮೂಲಕ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ.
ಎನ್‌ಡಿಎಗೆ ಮುನ್ನಡೆ, ಮಹಾಘಟಬಂಧನಗೆ ಹಿನ್ನಡೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟವು 122 ಸ್ಥಾನಗಳನ್ನು ಗೆದ್ದು ಬಹುಮತದತ್ತ ದಾಪುಗಾಲು ಇಟ್ಟಿದೆ.
ಈಗಿನ ಟ್ರೆಂಡ್ ಪ್ರಕಾರ 160 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ ಮೈತ್ರಿಯು ಹಿನ್ನಡೆಯಲ್ಲಿದ್ದು, 79 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.




