May 6, 2026

ಮಡಿಕೇರಿ: ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image583489280-1763103125302.jpg

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿರುವ ಎಂ. ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ಅವರ ಮನೆಯಿಂದ ನ. 5 ರಂದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಕಪಾಟಿನಲ್ಲಿದ್ದ 15,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಆರೋಪಿಗಳ ಪತ್ತೆಗೆ ಮಡಿಕೇರಿ ಉಪವಿಭಾಗ ಡಿವೈಎಸ್‌ಪಿ ಸೂರಜ್, ಮಡಿಕೇರಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಎಚ್.ವಿ., ಪಿಎಸ್‌ಐ ಮಂಜುನಾಥ್ ಹಾಗೂ ಸಿದ್ದಾಪುರ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬಂದಿ ಮತ್ತು ತಾಂತ್ರಿಕ ಸಿಬಂದಿಯನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ನ. 10ರಂದು ಶಿವಮೊಗ್ಗ ಜಿಲ್ಲೆ ಭದ್ರವಾತಿ ತಾಲೂಕು ಸಿದ್ದಾಪುರ ಗ್ರಾಮದ ಸಿದ್ದಲಿಂಗು ಎನ್. (28) ಮತ್ತು ರಘು. ಎನ್ (26) ಅವರನ್ನು ದಸ್ತಗಿರಿ ಮಾಡಿ 8.50 ಲಕ್ಷ ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!