ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ(114ವರ್ಷ) ನಿಧನ
ಪದ್ಮ ಪ್ರಶಸ್ತಿ ಪುರಸ್ಕೃತೆ, ಕನ್ನಡ ನಾಡಿನ ಹೆಮ್ಮೆಯ ಸಾಧಕಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯದಿಂದ ಇಂದು ಜಯನಗರ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ನವೆಂಬರ್ 2ರಿಂದ ಜಯನಗರ ಅಪೊಲೋ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.





