ಉಳ್ಳಾಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಉಳ್ಳಾಲ: ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು, ಕೊಲೆಯೋ ಅಥವಾ ಪ್ರಾಣಿಯ ದಾಳಿಯಿಂದ ಮೃತಪಟ್ಟಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ದಯಾನಂದ ಅವರ ಮೃತದೇಹ ರಕ್ತಸಿಕ್ತವಾಗಿ ಬಿದ್ದಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೋ ಪ್ರಾಣಿ ದಾಳಿಯಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.





