March 18, 2026

ವಿಟ್ಲ: ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕನ್ಯಾನದ ಯುವಕ ಪೊಲೀಸರ ವಶಕ್ಕೆ

0
IMG-20251114-WA0002.jpg

ವಿಟ್ಲ: ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 135/2020, ಕಲಂ; 143,147, 148,341, 323,324, 504,506 ಜೊತೆಗೆ 149 ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ, ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ ಯಾನೆ ಮೊಯಿದ ಶಾಕೀರ (27) ಎಂಬಾತನು ಮಾನ್ಯ ನ್ಯಾಯಾಲಯಕ್ಕೆವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿರುತ್ತಾನೆ.

ಸದ್ರಿ ಆರೋಪಿ ಮೇಲೆ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಯಾಗಿರುತ್ತದೆ. ದಿನಾಂಕ:13.11.2025 ರಂದು ಪ್ರಕರಣದ ಸದ್ರಿ ಆರೋಪಿಯನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿ, ದಿನಾಂಕ:14.11.2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ಸೂಕ್ತ ಜಾಮೀನಿನೊಂದಿಗೆ ಬಿಡುಗಡೆ ಮಾಡಿರುತ್ತದೆ.

Leave a Reply

Your email address will not be published. Required fields are marked *

error: Content is protected !!