“ಒಳ್ಳೆಯ ಮಾರ್ಕ್ಸ್ ಕೊಡ್ತೀನಿ ಪಬ್‌ಗೆ ಹೋಗಿ ಮಜಾ ಮಾಡೋಣ” ಎಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಉಪನ್ಯಾಸಕನ ವಿರುದ್ಧ FIR ದಾಖಲು
ಮೈಸೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತ ಕರೆಯುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.





