ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ದಾಳಿ: ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಸಾವು
ಕಲಬುರಗಿ: ಯಾದಗಿರಿಯಲ್ಲಿ ನಡೆದ ಮಾರಕ ಹಲ್ಲೆ ಪ್ರಕರಣದಲ್ಲಿ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ ಅಂಜಲಿ ಕಂಬಾನೂರ್ (38) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದ್ದಿದ್ದಾರೆ. ನವೆಂಬರ್ 12ರಂದು ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ಯಾದಗಿರಿ ನಗರದಲ್ಲಿ ದುಷ್ಕರ್ಮಿಗಳು ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು.





