February 4, 2026

ಕೇರಳ SSLC ಹೈಯರ್ ಸೆಕೆಂಡರಿ ಮತ್ತು VHSE ಪರೀಕ್ಷೆಗಳ ದಿನಾಂಕ ಪ್ರಕಟ

0
IMG-20211227-WA0003.jpg

ತಿರುವನಂತಪುರಂ: ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್ ಟು ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದ್ದಾರೆ. ಹೈಯರ್ ಸೆಕೆಂಡರಿ ಪರೀಕ್ಷೆಯು ಮಾರ್ಚ್ 30 ರಿಂದ ಏಪ್ರಿಲ್ 22 ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 31 ರಿಂದ ಏಪ್ರಿಲ್ 29 ರವರೆಗೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮಾರ್ಚ್ 10 ರಿಂದ 19 ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಫೆಬ್ರವರಿ 21 ರಿಂದ ಮಾರ್ಚ್ 15 ರವರೆಗೆ ಪ್ಲಸ್ ಟು ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ವಿ ಶಿವನ್‌ಕುಟ್ಟಿ ತಿಳಿಸಿದ್ದಾರೆ.

ಹೈಯರ್ ಸೆಕೆಂಡರಿ ಮಾದರಿ ಪರೀಕ್ಷೆಯು ಮಾರ್ಚ್ 16 ರಿಂದ 21 ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಮಾದರಿ ಪರೀಕ್ಷೆ ಮಾರ್ಚ್‌ 21ರಿಂದ 25ರವರೆಗೆ ನಡೆಯಲಿದೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!