January 31, 2026

ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವು

0
image_editor_output_image2120026175-1763448347497.jpg

ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

“ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ನ.16 ರಂದು ಸುಕ್ಮಾದ ಭೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದರು. ಈ ವರ್ಷ ಛತ್ತೀಸಗಢದಲ್ಲಿ 263 ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!