ಮದೀನಾ ಬಸ್ ದುರಂತ ಪ್ರಕರಣ: ಒಂದೇ ಕುಟುಂಬದ ಮೂರು ತಲೆಮಾರಿನ ಸದಸ್ಯರು ಸಜೀವ ದಹನ: ಮೃತರ ಪೈಕಿ 18 ಮಂದಿಯಲ್ಲಿ 9 ಮಕ್ಕಳು
ಹೈದರಾಬಾದ್: ಸೌದಿ ಅರೇಬಿಯಾದ ಮದೀನಾದಲ್ಲಿ ನಡೆದ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದು ಬಸ್ ಬೆಂಕಿ ಹೊತ್ತಿಕೊಂಡ ಭೀಕರ ಅಪಘಾತದಲ್ಲಿ ಒಟ್ಟು 45 ಮಂದಿ ಸಾವನಪ್ಪಿದ್ದಾರೆ. ಅದರಲ್ಲಿ ಹೈದರಾಬಾದ್‌ನ ಒಂದೇ ಕುಟುಂಬ ಮೂರು ತಲೆಮಾರಿನ 18 ಮಂದಿಯೂ ಸಜೀವ ದಹನವಾಗಿದ್ದಾರೆ.
ಮಕ್ಕಾದಿಂದ ಮದೀನಾಕ್ಕೆ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಸಾಗಾಟದ ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಭಾರತೀಯ ಕಾಲಮಾನ ಸೋಮವಾರ ಬೆಳಿಗ್ಗೆ 4ಕ್ಕೆ ದುರಂತ ಸಂಭವಿಸಿದೆ.
ಟ್ಯಾಂಕರ್‌ಗೆ ಅಪ್ಪಳಿಸಿದ ಬಸ್‌ಗೆ ಕ್ಷಣಾರ್ಧದಲ್ಲಿ ಬೆಂಕಿ ಆವರಿಸಿದ್ದು, ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ ಒಟ್ಟು 45 ಮಂದಿ ಭಾರತೀಯ ಸಾವನಪ್ಪಿದ್ದು, ಹೆಚ್ಚಿನ ಪ್ರಯಾಣಿಕರು ಆಂದ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಇದೀಗ ಅದರಲ್ಲಿ ಒಂದೇ ಕುಟುಂಬದ 18 ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅದರಲ್ಲಿ ಮೃತಪಟ್ಟ 18 ಮಂದಿ ಕುಟುಂಬ ಸದಸ್ಯರಲ್ಲಿ 9 ಮಕ್ಕಳೂ ಸೇರಿದ್ದಾರೆ.





