March 22, 2026

ಅಂಬಾಲಾ-ದೆಹಲಿ ಹೆದ್ದಾರಿಯಲ್ಲಿ ಬಸ್ ಅಪಘಾತ:
ಐವರು ಮೃತ್ಯು, ಎಂಟು ಮಂದಿಗೆ ಗಾಯ

0
88517306.jpg

ಮುಂಬೈ: ಚಲಿಸುತ್ತಿದ್ದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಅಂಬಾಲ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಹೀಲಿಂಗ್‌ ಟಚ್‌ ಆಸ್ಪತ್ರೆಯ ಸಮೀಪದಲ್ಲಿ ಮುಂಜಾನೆ ಈ ದುರಂತ ಸಂಭವಿಸಿದೆ. ದುರಂತದಲ್ಲಿ 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೋಗುತ್ತಿದ್ದ ಬಸ್‌ಗೆ ಹಿಂಬದಿಯಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದಿದೆ. ಎರಡು ಬಸ್‌ಗಳಿಗೆ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಎಎಸ್‌ಐ ನರೇಶ್‌ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!