ಪೈಪ್ ಲೈನ್ ಹಾನಿಯ ದುರಸ್ತಿ ಕಾರ್ಯ ಪೂರ್ಣ: ತುಂಬೆಯಿಂದ ಮಂಗಳೂರಿಗೆ ನೀರು ಪೂರೈಕೆ
ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಬುಧವಾರ ಸಂಜೆ ಪೂರ್ಣಗೊಂಡಿದ್ದು, ಗುರುವಾರ ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆಯ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬುಧವಾರ ಸಂಜೆ ದುರಸ್ತಿ ಕಾರ್ಯ ಪೂರ್ಣಗೊಳಿಸಿದ್ದು ಗುರುವಾರ ಬೆಳಗ್ಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.




