ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ SIT
ಬೆಳ್ತಂಗಡಿ: ಭಾರೀ ಕುತೂಹಲ ಕೆರಳಿಸಿದ್ದ ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ. ಈಗ ಆರೋಪಿಯಾಗಿ ಬದಲಾಗಿರುವ ಆರಂಭದ ದೂರುದಾರ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಆರು ಮಂದಿಯ ವಿರುದ್ದ ಎಸ್ಐಟಿ ಅಧಿಕಾರಿಗಳು ‘ಸುಳ್ಳು ಸಾಕ್ಷಿ’ ವರದಿಯನ್ನು ಸೆಕ್ಷನ್ 215 ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ.
ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ. ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು 215 ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಮುಂದೆ ಇಂದು ಮಧ್ಯಾಹ್ನ 3:15 ಕ್ಕೆ ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡ ಸಲ್ಲಿಕೆ ಮಾಡಿದೆ.




