February 2, 2026

ಉಪ್ಪುಂದ: ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರು ಸಂಪೂರ್ಣ ಸುಟ್ಟು ಭಸ್ಮ

0
image_editor_output_image-183972858-1763703649353.jpg

ಉಪ್ಪುಂದ ನವೆಂಬರ್ 20: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ಮಧ್ಯಾಹ್ನ ನಡೆದಿದೆ.

ಕಾರು ಚಾಲಕ ನಿತೇಶ್(31) ಮತ್ತು ಚಂದು (73) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಕಟ್ಕೆರೆಯಿಂದ ಉಪ್ಪುಂದಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆಯಿಂದ ರಸ್ತೆಯುದ್ದಕ್ಕೂ ದಟ್ಟ ಹೊಗೆ ಆವರಿಸಿ, ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಘಟನಾ ಸ್ಥಳಕ್ಕಾಗಮಿಸಿದ ಬೈಂದೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!