March 21, 2026

ಬೆಂಗಳೂರು ಎಟಿಎಂ ವಾಹನದ 7 ಕೋಟಿ ದರೋಡೆ: ಪೊಲೀಸ್ ಕಾನ್ಸ್ಟೇಬಲ್ ಪ್ರಕರಣ ಪ್ರಮುಖ ಸೂತ್ರಧಾರ

0
image_editor_output_image2030126690-1763712138959.jpg

ಬೆಂಗಳೂರು: ಎಟಿಎಂಗೆ ಹಣ ತುಂಬುವ ವಾಹನದಿಂದ 7 ಕೋಟಿ ಹಣ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇಡೀ ಪ್ರಕರಣದ ಸೂತ್ರಧಾರ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಎಂಬುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಗೋವಿಂದಪುರ ಠಾಣೆಯ ಕಾನ್‌ಸ್ಟೆಬಲ್ ಅಣ್ಣಪ್ಪ ನಾಯ್ಕ್ ಅವರನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ.

ಕುಂಬಳಗೋಡು ಸೇರಿದಂತೆ ಹಲವು ಕಡೆ ಕಾನ್‌ಸ್ಟೆಬಲ್ ಕೆಲಸ ಮಾಡಿದ್ದರು ಎಂದು ಮೂಲಗಳು ಹೇಳಿವೆ. ಕಾನ್‌ಸ್ಟೆಬಲ್ ಮೇಲೆ ಅನುಮಾನ ಬಲವಾಗಿದೆ. ಕಮ್ಮನಹಳ್ಳಿ, ಕಲ್ಯಾಣನಗರದ ಯುವಕರನ್ನು ದರೋಡೆಗೆ ಸಿದ್ಧಪಡಿಸಿದ್ದ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ತರಬೇತಿ ನೀಡಿದ್ದರು.

ಕಾನ್‌ಸ್ಟೆಬಲ್ ಸೂಚನೆಯಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ₹ 7.11 ಕೋಟಿ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಬೆಂಬಲ ನೀಡಿದ್ದ, ಕದ್ದ ಹಣವನ್ನು ನಗರದ ಗಡಿಪ್ರದೇಶದಲ್ಲಿ ಬಚ್ಚಿಟ್ಟು ಪರಾರಿ ಆಗಿದ್ದಾರೆ. ಪೊಲೀಸರ ತನಿಖೆ ಯಾವ ರೀತಿ ನಡೆಯುತ್ತದೆ? ಹೇಗೆ ತಪ್ಪಿಸಿಕೊಳ್ಳಬೇಕು? ಎಂಬೆಲ್ಲ ವಿಚಾರವನ್ನು ಚರ್ಚಿಸಿ ಅಣ್ಣಪ್ಪ ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!