May 3, 2026

ರೈಲ್ವೆ ಹಳಿ ದಾಟುವ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಢಿಕ್ಕಿ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

0
image_editor_output_image1066675321-1763963385300.jpg

ಬೆಂಗಳೂರು: ರೈಲ್ವೆ ಹಳಿ ದಾಟುವ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ.

ಮೃತರನ್ನು ಜಸ್ಟಿನ್ ಜೋಸೆಫ್ (21) ಹಾಗೂ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!