March 18, 2026

ಉಡುಪಿ: ಮನೆ ಕಳವು ಪ್ರಕರಣ: ಆರೋಪಿಗೆ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ

0
image_editor_output_image1628002331-1763967396524.jpg

ಉಡುಪಿ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ನಡೆದ ಮನೆ ಕಳವು ಪ್ರಕರಣದ ಆರೋಪಿ ದಂಡದೊಂದಿಗೆ ಒಂದೂವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ.

ಕಾರ್ಕಳ ಮೂಲದ ಉಮಾನಾಥ ಪ್ರಭು (59) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.

ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿರುವ ಉಮಾನಾಥ ಪ್ರಭು ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಟಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಬಿ. ತೀರ್ಪು ಪ್ರಕಟಿಸಿದ್ದಾರೆ.

2025ರ ಮೇ ತಿಂಗಳಿನಲ್ಲಿ ಕೊಲ್ಲೂರು ಠಾಣಾ ವ್ಯಾಪ್ತಿಯ ಇಡೂರು-ಕುಂಜ್ಞಾಡಿ ಗ್ರಾಮದ ಜನತಾ ಕಾಲನಿಯ ಮನೆಯೊಂದರಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಎರಡು ಚಿನ್ನದ ಬಳೆಗಳ ಕಳ್ಳತನ ನಡೆದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದು ಬಳಿಕ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಜಾಡು ಹಿಡಿದ ಪೊಲೀಸರು ಜೂ.17ರಂದು ಅಜೆಕಾರು ಎಂಬಲ್ಲಿ ಆರೋಪಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!