ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.
ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿದ ಮಂಗಳೂರು ಜಿಲ್ಲಾ ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.




