January 31, 2026

ಹಾಂಗ್ ಕಾಂಗ್: ಅಪಾರ್ಟ್‌ಮೆಂಟ್ ಗಳಲ್ಲಿ ಭೀಕರ ಅಗ್ನಿ ಅವಘಡ: 44 ಮಂದಿ ಮೃತ್ಯು, ಹಲವರು ನಾಪತ್ತೆ

0
images.jpeg

ಹಾಂಗ್ ಕಾಂಗ್: ವಸತಿ ಸಂಕೀರ್ಣದ ಹಲವಾರು ಎತ್ತರದ ಅಪಾರ್ಟ್ ಮೆಂಟ್ ಬ್ಲಾಕ್ ಗಳಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ.

ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಮೂವರನ್ನು ನರಹತ್ಯೆ ಸಂಶಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸೌತ್ ಚೈನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಪೊಲೀಸರು ಒಂದು ಸಾಲಿನ ಹೇಳಿಕೆಯಲ್ಲಿ ಈ ಬಂಧನವನ್ನು ದೃಢಪಡಿಸಿದ್ದು, ಶಂಕಿತರ ಕ್ರಮದ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡುವುದಾಗಿ ಪೊಲೀಸ್ ಇಲಾಖೆ ಹೇಳಿದೆ.

ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಹಾಂಕಾಂಗ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾನ್ ಲೀ ದೃಢಪಡಿಸಿದ್ದು, ಶೋಧ ತಂಡಗಳು ನಾಪತ್ತೆಯಾಗಿರುವ ನಿವಾಸಿಗಳನ್ನು ಹುಡುಕುತ್ತಿದ್ದಾರೆ. ಭಸ್ಮವಾದ ಕಟ್ಟಡಗಳಿಂದ ದಟ್ಟ ಹೊಗೆ ಇನ್ನೂ ಹೊರಸೂಸುತ್ತಿದೆ ಎಂದು ಹೇಳಿದ್ದಾರೆ. ಮಧ್ಯಾಹ್ನ 2.51ಕ್ಕೆ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ವಿಭಾಗಕ್ಕೆ ಮೊದಲ ಕರೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹತ್ತಾರು ಅಗ್ನಿಶಾಮಕ ಯಂತ್ರಗಳು, ಆಂಬುಲೆನ್ಸ್ ಗಳು ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಸುಮಾರು 2000 ಅಪಾರ್ಟ್‍ಮೆಂಟ್‍ಗಳ ನವೀಕರಣ ಕೆಲಸ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!