February 1, 2026

ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ

0
image_editor_output_image-95072931-1764221076540.jpg

ಕಡಬ: ಪತ್ನಿಯ ಜೊತೆ ಗೆಳೆಯನೊಬ್ಬನ ಸಲುಗೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37) ಎಂದು ಗುರುತಿಸಲಾಗಿದೆ. ಪತ್ನಿಯ ಜೊತೆ ಗೆಳೆಯನೊಬ್ಬ ಮೊಬೈಲ್ ಮೂಲಕ ಸಂಪರ್ಕದಲ್ಲಿರವ ವಿಷಯ ತಿಳಿದು ತೀವ್ರ ನೊಂದಿದ್ದ ರಾಕೇಶ್ ನವೆಂಬರ್ 19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!