March 18, 2026

ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಆರೋಪಿಗಳ ಬಂಧನ

0
image_editor_output_image1471240830-1764221327404.jpg

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ.

ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಬಂಧಿತ ಆರೋಪಿಗಳಾಗಿದ್ದಾರೆ.

ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದರು. ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರ ಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಮತ್ತು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6 ಗಂಟೆ ಸಮಯಕ್ಕೆ ಬ್ಯಾಗ್ ನಲ್ಲಿ 6,79,000 ರೂಪಾಯಿ ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಇಟ್ಟುಕೊಂಡು ಹೋಗಿದ್ದರು.

ಬಳಿಕ ಉಡುಪಿ ಕಡೆ ಕೆಲಸದ ವಿಚಾರವಾಗಿ ಹೋಗುವಾಗ ಬ್ಯಾಗ್ ಒಳಗಡೆ ಇಟ್ಟಿದ ಚಿನ್ನಾಭರಣ ನೋಡಿದಾಗ ಯಾರೋ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಉಡುಪಿಯಿಂದ ವಾಪಸ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮೇ.4 ರಂದು ಜೆ.ಲತಾ ಪ್ರಕರಣ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!