March 18, 2026

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಉರುಳಿಬಿದ್ದ ಕಾರು: ಐವರು ಸಾವು, ಇಬ್ಬರು ಗಂಭೀರ

0
image_editor_output_image-191389413-1764308300859.jpg

ಲಕ್ನೋ: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ.

ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ ಪರಾಸ್ ಪೂರ್ವಾ ಗ್ರಾಮದ ಬಳಿ ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನ ಬಾಗಿಲುಗಳು ಆಟೋಮೆಟಿಕ್ ಲಾಕ್ ಆಗಿದ್ದರಿಂದ, ಪ್ರಯಾಣಿಕರು ಹೊರಬರಲಾಗದೆ ಒಳಗೆ ಸಿಲುಕಿಕೊಂಡಿದ್ದಾರೆ. ಜೋರಾದ ಶಬ್ದ ಮತ್ತು ಸಹಾಯ ಮಾಡಿ ಎಂಬ ಕೂಗು ಕೇಳಿದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ ವೇಳೆ ಕಾರು ನೀರಿನಲ್ಲಿ ಮುಳುಗಿತ್ತು.‌

ತಕ್ಷಣವೇ ಗ್ರಾಮಸ್ಥರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟಾರ್ಚ್‌ಲೈಟ್ ಬಳಸಿ, ದೋಣಿಯೊಂದಿಗೆ ಕಾಲುವೆಗೆ ತೆರಳಿ ಕಾರಿಗೆ ಹಗ್ಗವನ್ನು ಕಟ್ಟಿ ಅದನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಿಲುಗಳು ಜಾಮ್ ಆಗಿರುವುದನ್ನು ಕಂಡು ಇಟ್ಟಿಗೆಯಿಂದ ಕಿಟಕಿ ಗಾಜನ್ನು ಒಡೆದು ಪ್ರಯಾಣಿಕರನ್ನು ಹೊರಗೆಳೆಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!