ತುಂಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ನಿಧನ
ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿದ್ದ ಸೋಮಪ್ಪ ಕೋಟ್ಯಾನ್ ತುಂಬೆ ಅವರು ನಿಧನರಾಗಿದ್ದಾರೆ.
ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಸೋಮಪ್ಪ, ಬಿಜೆಪಿ ಜಿಲ್ಲಾ ಮಂಡಲದ ವಿವಿಧ ಜವಾಬ್ದಾರಿಯನ್ನು ನಿಭಾಯಿಸಿದವರು.
ಅನೇಕ ಸಂಘಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು, ಕಳೆದ 25 ವರ್ಷಗಳಿಂದ ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿಯಾಗಿ, ಬಿಲ್ಲವ ಸಮಾಜದ ಗುರಿಕಾರರಾಗಿ, ಯುವ ಸಮುದಾಯದ ಮಾರ್ಗದರ್ಶಕರಾಗಿದ್ದರು.
ಅಲ್ಪ ಕಾಲದ ಅನಾರೋಗ್ಯ ದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಎರಡು ಗಂಡು, ಒಂದು ಹೆಣ್ಣು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.




