ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ
ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚಾರ್ಮಾಡಿ, ಲಾಯಿಲ, ಕುವೆಟ್ಟು, ಪೆರಾಲ್ದರಕಟ್ಟೆ, ತಣ್ಣೀರುಪಂತ ಹಾಗೂ ಕುಕ್ಕಳ ವಾರ್ಡ್ ಗಳಿಗೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಬುಧವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಜಿಲ್ಲಾಧ್ಯಕ್ಷರ ನಿಯೋಗವನ್ನು ಸ್ಥಳೀಯ ಚುನಾಯಿತ ಸದಸ್ಯರು ಹಾಗೂ ಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದರು. ಗ್ರಾಮ ಪಂ ಎಸ್‌ಡಿಪಿಐ ಬೆಂಬಲಿತ ಸದಸ್ಯರು ತಮ್ಮ ವಾರ್ಡ್ ನಲ್ಲಿ ನಡೆಸಿದ ಅಭಿವೃದ್ಧಿ ಯೋಜನೆಗಳು, ಪಂಚಾಯತ್ ವತಿಯಿಂದ ಮಾಡಿಸಿದ ಕೆಲಸ ಕಾರ್ಯಗಳ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.
ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರು ಇನಾಸ್ ರೋಡ್ರಿಗಸ್, ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.








