ಪುತ್ತೂರು: ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು ಟೆಂಪೊ ಪಲ್ಟಿ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.
ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.




