ಪುತ್ತೂರು: ಕೆಟ್ಟು ಹೋದ ವಾಹನದಲ್ಲಿ ಗೋವುಗಳು ಪತ್ತೆ
ಪುತ್ತೂರು: ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಶನಿವಾರ ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ.
ಅಕ್ರಮ ಗೋ ಸಾಗಾಟ ಮಾಡುವ ಸಂದರ್ಭ ವಾಹನ ಕೆಟ್ಟು ಹೋಗಿದೆ ಎಂದು ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಾಹಿ ಪಡೆದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಾರಿಸುದಾರರಿಲ್ಲದ ಈ ಗೋವುಗಳನ್ನು ಕಳವು ಮಾಡಿ ಸಾಗಾಟ ಮಾಡಿರುವ ಸಂಶಯ ವ್ಯಕ್ತವಾಗಿದ್ದು, ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಗ್ರಹಿಸಿದೆ.




