May 3, 2026

ನನ್ನ, ಡಿ.ಕೆ ಶಿವಕುಮಾ‌ರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

0
image_editor_output_image2038752379-1764400203290.jpg

ಬೆಂಗಳೂರು: ನನ್ನ ಹಾಗೂ ಡಿಸಿಎಂ ಡಿ.ಕೆ ಶಿವಕುಮಾ‌ರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಶನಿವಾರ ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಉಪಹಾರ ನೆಪದಲ್ಲಿ ಪರಸ್ಪರ ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿ ಅನಗತ್ಯ ಗೊಂದಲ ನಿರ್ಮಾಣವಾಗಿದೆ. ನಮಗೆ 2028ರ ವಿಧಾನಸಭಾ ಚುನಾವಣೆ ಭಾರೀ ಮುಖ್ಯ ನನ್ನ ಹಾಗೂ ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಇಲ್ವ ಮುಂದೆಯೂ ಇರುವುದಿಲ್ಲ ಎಂದು ಹೇಳಿದರು.

ಪಕ್ಷದ ಹೈಕಮಾಂಡ್ ಹೇಳಿದಂತೆ ನಾವು ಕೇಳುತ್ತೇವೆ. ನಾಳೆಯಿಂದ ರಾಜ್ಯದಲ್ಲಿ ಯಾವುದೇ ಗೊಂದಲ ರುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದರು

Leave a Reply

Your email address will not be published. Required fields are marked *

error: Content is protected !!