May 17, 2026

ವಾಟ್ಸಾಪ್‌ನಲ್ಲಿ ಡೆತ್‌ನೋಟ್‌ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

0
image_editor_output_image-1438560446-1764400579854.jpg

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ನವವಿವಾಹಿತೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್‌ನೋಟ್‌ ಬರೆದಿಟ್ಟು, ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಭದ್ರಾವತಿ ತಾಲೂಕಿನ ಡಿ.ಬಿ.ಹಳ್ಳಿ ಮೂಲದ ಲತಾ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಏಪ್ರಿಲ್ 14 ರಂದು ಶಿಕಾರಿಪುರದ ದಿಂಡದಹಳ್ಳಿ ಗ್ರಾಮದ ಗುರುರಾಜ್ ಜೊತೆ ಆಕೆಯ ಮದುವೆಯಾಗಿತ್ತು. ಗುರುರಾಜ್ ಕೆಪಿಸಿಎಲ್‌ನಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ (AEE) ಕಾರ್ಯನಿರ್ವಹಿಸುತ್ತಿದ್ದಾರೆ.

ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಗಂಡ ಗುರುರಾಜ್, ಅತ್ತೆ ಶಾರದಮ್ಮ, ನಾದಿನಿ ನಾಗರತ್ನಮ್ಮ, ರಾಜೇಶ್ವರಿ, ಹಾಗೂ ನಾಗರತ್ನಮ್ಮನ ಗಂಡ ಕೃಷ್ಣಪ್ಪ ಸೇರಿ ಐವರ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಎಫ್ಐಆರ್ನಲ್ಲಿ ಮದುವೆ ಸಂದರ್ಭದಲ್ಲಿ, ಅಳಿಯ ಗುರುರಾಜ್ ಮತ್ತು ಅವರ ಕುಟುಂಬಸ್ಥರ ಬೇಡಿಕೆಯಂತೆ ಚಿನ್ನ ಹಾಗೂ 10 ಲಕ್ಷ ರೂ. ನಗದನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಸುಮಾರು 20 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾಗಿ ಪೋಷಕರು ತಿಳಿಸಿದ್ದಾರೆ.

ಸರ್ಕಾರಿ ಹುದ್ದೆಗೆ ತಕ್ಕಂತೆ ಇನ್ನೋವಾ ಕಾರು ಕೊಡಬೇಕು ಎಂದು ಪೀಡಿಸುತ್ತಿದ್ದರು ಎಂದು ದೂರಲಾಗಿದೆ. ಕಾರು, ಮನೆ ನೀಡದಿದ್ದರೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಿದ್ದರು ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!