ಪುತ್ತೂರಿನಲ್ಲಿ ಮುಂದುವರಿದ BJP Vs ಪುತ್ತಿಲ ಪರಿವಾರದ ಜಟಾಪಟಿ: ಕಾರ್ಯಕ್ರಮದಲ್ಲಿ ಜಿಲ್ಲಾ BJP ಉಪಾಧ್ಯಕ್ಷರನ್ನ ಹೊರದಬ್ಬಿದ ಪುತ್ತಿಲ ಪರಿವಾರದ ಕಾರ್ಯಕರ್ತರು
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿ ಮುಂದುವರಿದಿದೆ. ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನ ಹೊರದಬ್ಬಿದ ಘಟನೆ ನಡೆದಿದೆ.
ಪುತ್ತೂರಿನಲ್ಲಿ ನಡೆದ ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನ ಪುತ್ತಿಲ ಪರಿವಾರದ ಕಾರ್ಯಕರ್ತರು ಹೊರದಬ್ಬಿದ್ದಾರೆ. ದೇವರ ಕಾರ್ಯಕ್ರಮದಲ್ಲೇ ಪುತ್ತಿಲ ಕಾರ್ಯಕರ್ತರ ಹೈಡ್ರಾಮ ಮಾಡಿದ್ದಾರೆ.
ಶ್ರೀನಿವಾಸ ಕಲ್ಯಾಣೋತ್ಸವದ ಸ್ಥಾಪಕಾಧ್ಯಕ್ಷರನ್ನೇ ಪುತ್ತಿಲ ಪರಿವಾರದ ಕಾರ್ಯಕರ್ತರು ಹೊರತತಳ್ಳಿದ್ದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣದ ಮೇರೆಗೆ ಕುಟುಂಬ ಸಮೇತ ಆಗಮಿಸಿದ್ದ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ಅವಮಾನಿಸಿದ್ದಾರೆ .




