March 20, 2026

ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

0
image_editor_output_image1103586244-1764658996823.jpg

ಬೆಂಗಳೂರು: ಎರಡು ವರ್ಷಗಳ ಹಿಂದೆ ಪತಿ ಕಳೆದುಕೊಂಡು ಮಾನಸಿಕವಾಗಿ ನೊಂದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತರನ್ನು 31 ವರ್ಷದ ಸೌಭಾಗ್ಯ ಎಂದು ಗುರುತಿಸಲಾಗಿದ್ದು, ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!