February 2, 2026

ಪೋಕ್ಸೋ ಪ್ರಕರಣ: ಬಿಎಸ್‌ವೈಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

0
image_editor_output_image-1050478231-1764665551705.jpg

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಗೆ ತಡೆ ನೀಡಿದೆ.

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ ಅವರು ಹೈಕೋರ್ಟ್ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ.

ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಬಿಎಸ್‌ವೈಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.

ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಡಿ.2ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶ ಹೊರಡಿಸಿತ್ತು.

Leave a Reply

Your email address will not be published. Required fields are marked *

error: Content is protected !!