February 2, 2026

ಮಂಗಳೂರು: ಸ್ಕೂಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image-1638897938-1764666051051.jpg

ಮಂಗಳೂರು: ಸ್ಕೂಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ.

ನವೆಂಬರ್ 14 ರಂದು ಮಂಗಳೂರಿಗೆ ಬಂದಿದ್ದ ಇವರು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!