March 19, 2026

ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಢಿಕ್ಕಿ: ನಾಲ್ವರು ಸಾವು

0
image_editor_output_image514912101-1764748272665.jpg

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ.

ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ(17), ಗಣೇಶ್ ಅರಳಿಮಟ್ಟಿ(20), ಪ್ರವೀಣ ಶೇಡಬಾಳ(22) ಪ್ರಜ್ವಲ್ ಶೇಡಬಾಳ(17) ಮೃತರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ವೊಂದು ಹೊರಟಿತ್ತು. ಈ ವೇಳೆ ಕಾರು ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

error: Content is protected !!