March 20, 2026

ಶಿವಮೊಗ್ಗ: ಮದುವೆಯ ಮರುದಿನವೇ ನವವಿವಾಹಿತ ಹೃದಯಾಘಾತದಿಂದ ಸಾವು

0
image_editor_output_image-1883240376-1764760602410.jpg

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್ (30) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಇದೇ ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್ ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮದುವೆಯಾದ ನಂತರ ರಮೇಶ್‌ ವಧುವಿನ‌ ಮನೆಗೆ ತೆರಳಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿ ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಕರೆಯೊಯ್ಯುವ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!